Header Ads Widget

ಸರ್ಚ್ ಕೂರ್ಗ್ ಮೀಡಿಯ

ಪಡಿಯಾನಿಯಲ್ಲಿ ಸುನ್ನೀ ಸೆಂಟರ್ ಶಿಲಾನ್ಯಾಸ ಕಾರ್ಯಕ್ರಮ

ಪಡಿಯಾನಿಯಲ್ಲಿ ಸುನ್ನೀ ಸೆಂಟರ್ ಶಿಲಾನ್ಯಾಸ ಕಾರ್ಯಕ್ರಮ

ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ ಎಸ್ ಎಫ್ ಪಡಿಯಾನಿ ಶಾಖೆಯ ಅದೀನದಲ್ಲಿ ನಿರ್ಮಿಸುತ್ತಿರುವ ನೂರುಲ್ ಉಲಮಾ ಸುನ್ನೀ ಸೆಂಟರ್ ಕಟ್ಟಡದ ಶೀಲಾನ್ಯಾಸ ಕಾರ್ಯಕ್ರಮವನ್ನು ಕೂರತು ಸ್ವಾದಾತ್ ಸಯ್ಯದ್ ಫಝಲ್ ಕೋಯಮ್ಮ ತಂಗಳ್ ಕೂರ ರವರು ನೆರವೇರಿಸಿ ನಾಡಿನ ಐಕ್ಯತೆ ಹಾಗೂ ಸುಭಿಕ್ಷೆಗಾಗಿ ಸಾಮೂಹಿಕ ಪ್ರಾರ್ಥನೆಗೆ ನೇತೃತ್ವ ನೀಡಿದರು.

ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ನಾಇಬ್ ಖಾಝಿ ಶಾದುಲಿ ಫೈಝಿ, ಎಸ್ ವೈ ಎಸ್ ಕರ್ನಾಟಕ ರಾಜ್ಯ ಘಟಕದ ಸದಸ್ಯರಾದ ಸಯ್ಯದ್ ಇಲ್ಯಾಸ್ ಅಲ್ ಹೈದರೂಸಿ ತಂಗಳ್,ಅಜೀಜ್ ತಂಗಳ್, ಷರಫುದ್ದಿನ್ ತಂಗಳ್, ಇಶಾಕ್ ತಂಗಳ್, ಹಬೀಬ್ ತಂಗಳ್, ಎಸ್ ವೈ ಎಸ್ ಜಿಲ್ಲಾಧ್ಯಕ್ಷ ಹಮೀದ್ ಮುಸ್ಲಿಯಾರ್, ಎಸ್ ವೈ ಎಸ್ ಮಡಿಕೇರಿ ಜೋನ್ ಅಧ್ಯಕ್ಷರಾದ ಮುನೀರ್ ಮಲ್ಹರಿ, ಪಡಿಯಾನಿ ಎಸ್ ವೈ ಎಸ್ ಅಧ್ಯಕ್ಷರಾದ ಬಿಎ ಮೊದ್ದಿನ್,ಮುಸ್ಲಿಂ ಜಮಾಅತ್ ಅಧ್ಯಕ್ಷರಾದ ಅಬ್ಬಾಸ್ ಸಖಾಫಿ, ಪಡಿಯಾನಿ ಜಮಾಅತ್ ಅಧ್ಯಕ್ಷ ಇಬ್ರಾಹಿಂ ಮುಸ್ಲಿಯಾರ್, ಖತೀಬ್ ಅಬ್ದುಲ್ ಗಫೂರ್ ಸಖಾಫಿ, ಗ್ರಾಮ ಪಂಚಾಯಿತಿ ಸದಸ್ಯರಾದ ಯೂಸುಫ್, ಇಸ್ಮಾಯಿಲ್, ಗಫೂರ್ ಹಾಗೂ ಮತಿತ್ತರರು ಉಪಸ್ಥಿತರಿದ್ದರು.

ವರದಿ:  ಸಿ.ಎ. ಅಶ್ರಫ್, ಚೆಯ್ಯಂಡಾಣೆ