Header Ads Widget

Responsive Advertisement

ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಪೆಮ್ಮಂಡ ಕೌಶಿ ಕಾವೇರಮ್ಮ ಹಾಗೂ ಉಪಾಧ್ಯಕ್ಷರಾಗಿ ಕೋಡಿರ ವಿನೋದ್ ನಾಣಯ್ಯ ಅವಿರೋಧ ಆಯ್ಕೆ

ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಪೆಮ್ಮಂಡ ಕೌಶಿ ಕಾವೇರಮ್ಮ ಹಾಗೂ ಉಪಾಧ್ಯಕ್ಷರಾಗಿ ಕೋಡಿರ ವಿನೋದ್ ನಾಣಯ್ಯ ಅವಿರೋಧ ಆಯ್ಕೆ

ಚೆಯ್ಯಂಡಾಣೆ, ಆ 10: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿಯ 2ನೇ ಅವಧಿಯಲ್ಲಿ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದರಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪೆಮ್ಮಂಡ ಕೌಶಿ ಕಾವೇರಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮೀಸಲು ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಕೋಡಿರ ವಿನೋದ್ ನಾಣಯ್ಯ ಮಾತ್ರ ನಾಮಪತ್ರ ಸಲ್ಲಿಸಿದರು. ಬೇರೆ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಕಾರಣ ಅಧ್ಯಕ್ಷೆಯಾಗಿ ಪೆಮ್ಮಂಡ ಕೌಶಿ ಕಾವೇರಮ್ಮ ಹಾಗೂ ಉಪಾಧ್ಯಕ್ಷರಾಗಿ ಕೋಡಿರ ವಿನೋದ್ ನಾಣಯ್ಯ ಅವಿರೋಧವಾಗಿ ಆಯ್ಕೆಯಾದರು.

ನೂತನವಾಗಿ ಅವಿರೋಧ ಆಯ್ಕೆಯಾದ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಮಾತನಾಡಿ ಯಾವುದೇ ಕಷ್ಟ ಸುಖ ಬಂದರು ಉತ್ತಮ ಕೆಲಸ ಕಾರ್ಯ ಮಾಡುವೆ ಸದಸ್ಯೆಯಾಗಿದ್ದಾಗ ಒಂದು ಗ್ರಾಮವನ್ನು ಮಾತ್ರ ನೋಡಿಕೊಳ್ಳುವ ಜವಾಬ್ದಾರಿ ಇತ್ತು ಈಗ 7 ಗ್ರಾಮವು ನನ್ನ ಮೇಲಿದೆ ಎಲ್ಲರನ್ನು ಎರಡುವರೆ ವರ್ಷಗಳ ಕಾಲ ನಿಕಟ ಪೂರ್ವ ಅಧ್ಯಕ್ಷರಾದ ರಾಜೇಶ್ ಅಚ್ಚಯ್ಯ ಯಾವ ರೀತಿಯಲ್ಲಿ ಮಾರ್ಗದರ್ಶನ ನೀಡಿದ್ದರೋ ಆದೇ ರೀತಿ ನಿಮೆಲ್ಲರ ಸಹಕಾರದೊಂದಿಗೆ ಉತ್ತಮ ಆಡಳಿತ ನಡೆಸುವೆ ಎಂದರು.

ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಕೋಡಿರ ವಿನೋದ್ ನಾಣಯ್ಯ ಮಾತನಾಡಿ ಇದುವರೆಗೂ ನಿಮ್ಮಲ್ಲರ ಸಹಕಾರದಿಂದ ಉತ್ತಮವಾಗಿ ಗ್ರಾಮ ಪಂಚಾಯಿತಿ ಆಡಳಿತ ನಡೆದಿದೆ ಆದೇ ರೀತಿ ಇನ್ನು ಕೂಡ ನಿಮೆಲ್ಲರ ಸಹಕಾರದಿಂದ ರಾಜ್ಯದಲ್ಲೇ ಒಂದು ಉತ್ತಮ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ಶ್ರಮಿಸುತ್ತೇನೆ ಹಾಗೂ ಅವಿರೋಧ ಆಯ್ಕೆಯಾಗಲು ಸಹಕರಿಸಿದ ಎಲ್ಲಾ ಸದಸ್ಯರಿಗೂ ಧನ್ಯವಾದ ಎಂದರು.

ಚುನಾವಣಾಧಿಕಾರಿಯಾಗಿ ಶಿಕ್ಷಣಾಧಿಕಾರಿ ಅಕ್ಷರದಾಸೋಹದ ಹೇಮಂತ್ ಕಾರ್ಯ ನಿರ್ವಹಿಸಿದರು. ಈ ಸಂದರ್ಭ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು,ತಾಲೂಕು ಪಂಚಾಯಿತಿ ಮಾಜಿ ಸದಸ್ಯರು,ಬಿಜೆಪಿ, ಕಾಂಗ್ರೆಸ್ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಸಿಬ್ಬಂದಿಗಳು ಸೂಕ್ತ ಬಂದೂಬಸ್ತ್  ಏರ್ಪಡಿಸಿದರು.

ವರದಿ:  ಸಿ.ಎ. ಅಶ್ರಫ್, ಚೆಯ್ಯಂಡಾಣೆ