ಕರಿಕೆ ಗ್ರಾ.ಪಂ ಅಧ್ಯಕ್ಷರಾಗಿ ಬಾಲಚಂದ್ರನ್ ನಾಯರ್, ಉಪಾಧ್ಯಕ್ಷರಾಗಿ ಕಲ್ಪನಾ ಅವಿರೋಧ ಆಯ್ಕೆ
ಮಡಿಕೇರಿ ತಾಲ್ಲೂಕಿನ ಕರಿಕೆ ಗ್ರಾ.ಪಂ ಅಧ್ಯಕ್ಷರಾಗಿ ಎನ್.ಬಾಲಚಂದ್ರನ್ ನಾಯರ್ ಹಾಗೂ ಉಪಾಧ್ಯಕ್ಷರಾಗಿ ಕುದುಪಜೆ ಕಲ್ಪನಾ ಜಗದೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಬೆಂಬಲಿತ 9 ಮತ್ತು ಬಿಜೆಪಿ ಬೆಂಬಲಿತ ಇಬ್ಬರು ಸದಸ್ಯರು ಸೇರಿ ಒಟ್ಟು 11 ಸದಸ್ಯ ಬಲದ ಪಂಚಾಯ್ತಿಯ ಎರಡನೇ ಅವಧಿಯ ಅಧಿಕಾರಕ್ಕೆ ಇಂದು ಚುನಾವಣಾ ಪ್ರಕ್ರಿಯೆ ನಡೆಯಿತ್ತಾದರೂ ಯಾರೂ ಪ್ರತಿಸ್ಪರ್ಧಿಗಳು ಇಲ್ಲದ ಕಾರಣ ಇಬ್ಬರು ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾ ಅಧಿಕಾರಿಯಾಗಿ ಸಹಾಯಕ ಕೃಷಿ ನಿರ್ದೇಶಕ ರಿಯಾಜ್ ಅಹಮ್ಮದ್ ಕಾರ್ಯನಿರ್ವಹಿಸಿದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪಿ.ಪಿ.ಗಣಪತಿ ಹಾಗೂ ಎಲ್ಲಾ 11 ಸದಸ್ಯರು ಉಪಸ್ಥಿತರಿದ್ದರು.
ನೂತನ ಅಧ್ಯಕ್ಷ ಬಾಲಚಂದ್ರನ್ ನಾಯರ್ ಮಾತನಾಡಿ ಮೂಲಭೂತ ಸೌಲಭ್ಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಜನಪರವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಕರಿಕೆಯನ್ನು ಮಾದರಿ ಗ್ರಾ.ಪಂ ಯನ್ನಾಗಿ ಮಾಡುವುದಾಗಿ ತಿಳಿಸಿದರು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network