Header Ads Widget

ಸರ್ಚ್ ಕೂರ್ಗ್ ಮೀಡಿಯ

ಚೆಯ್ಯಂಡಾಣೆ ಸ.ಮಾ.ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಚೆಯ್ಯಂಡಾಣೆ ಸ.ಮಾ.ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಚೆಯ್ಯಂಡಾಣೆ: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಧ್ವಜಾರೋಹಣವನ್ನು ಭಾರತೀಯ ಸೇನೆಯ ಯೋಧ ಹವಾಲ್ದಾರ್ ಚೈಯಂಡ ಶಂಕರಿ ನೆರವೆರಿಸಿದರು. ಮುಖ್ಯ ಶಿಕ್ಷಕಿ ಹೇಮಾ ಕುಮಾರಿ ದಿನದ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಿಂದ ದಿನದ ಮಹತ್ವದ ಕುರಿತು ಭಾಷಣ,ಹಾಡು, ರಾಷ್ಟ ಗೀತೆ ಹಾಗೂ ವಿವಿಧ  ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಶಾಲೆಯಿಂದ ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಈ ಸಂದರ್ಭ ಎಸ್ ಡಿ ಎಂ ಸಿ ಅಧ್ಯಕ್ಷ ರತ್ನಾ,ಚೈಯಂಡ ಲವ ಅಪ್ಪಚ್ಚು, ಶಾಲಾ ಶಿಕ್ಷಕ ವೃಂದ ದವರು,ಎಸ್ ಡಿ ಎಂ ಸಿ ಸದಸ್ಯರು,ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು.

ವರದಿ:  ಸಿ.ಎ. ಅಶ್ರಫ್, ಚೆಯ್ಯಂಡಾಣೆ