Header Ads Widget

Responsive Advertisement

ಪ್ರತಿಮಾ ಹರೀಶ್ ರೈ ಬರೆದಿರುವ "ಅಂತರಗಂಗೆ" ಪುಸ್ತಕ ಜೂ.9 ರಂದು ಲೋಕಾಪ೯ಣೆ

ಲೇಖಕಿ ಪ್ರತಿಮಾ ಹರೀಶ್ ರೈ ಬರೆದಿರುವ ಅಂತರಗಂಗೆ ಪುಸ್ತಕ ಜೂ.9 ರಂದು ಲೋಕಾಪ೯ಣೆ ಗೊಳ್ಳಲಿದೆ.

ಮಡಿಕೇರಿ ನಗರದ "ರೆಡ್ ಬ್ರಿಕ್ಸ್ ಇನ್" ನ ಸತ್ಕಾರ್ (ಪಾಕಶಾಲಾ ಮೇಲ್ಭಾಗ)  ಸಭಾಂಗಣದಲ್ಲಿ ಬೆಳಿಗ್ಗೆ 10.30 ಘಂಟೆಗೆ ನಡೆಯುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಕ.ಸಾ.ಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಉದ್ಘಾಟಿಸಲಿದ್ದು, ಸಾಹಿತಿ ಶ. ಗ. ನಯನತಾರಾ ಅಂತರಗಂಗೆ ಪುಸ್ತಕವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಮಡಿಕೇರಿ ಆಕಾಶವಾಣಿ ಉಧ್ಘೋಷಕ ಸುಬ್ರಾಯ ಸಂಪಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕೊಡಗು ವಿಶ್ವವಿದ್ಯಾನಿಲಯದ ಕನ್ನಡ ಉಪನ್ಯಾಸಕ ಡಾ. ಜಮೀರ್ ಅಹಮ್ಮದ್ ಕೃತಿ ವಿಮರ್ಶೆ ಮಾಡಲಿದ್ದಾರೆ. ಅಥಿತಿಗಳಾಗಿ ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಹೆಚ್.ಟಿ., ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಡಿ.ಜಗದೀಶ್ ರೈ ಪಾಲ್ಗೊಳ್ಳಲಿದ್ದಾರೆ ಎಂದು ಪ್ರತಿಮಾ ಹರೀಶ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.