ಮೂರ್ನಾಡು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರಾಜಪೇಟೆ ತಾಲೂಕಿನ ಕಾಂತೂರು-ಮೂರ್ನಾಡು ವಲಯದ ಹೊದ್ದೂರು ವಾಟೇಕಾಡು ಮತ್ತು ಮರಗೋಡುವಿನ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ವಾಟೇಕಾಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎರಡು ದಿನಗಳ ಶ್ರಮದಾನ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು.
ಹೊದ್ದೂರು ವಾಟೇಕಾಡು ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬೆಳೆದಿದ್ದ ಗಿಡ-ಗಂಟೆಗಳನ್ನು ಕಡಿದು ಸ್ವಚ್ಚಗೊಳಿಸುವುದರ ಮೂಲಕ ಎರಡು ದಿನಗಳ ಕಾಲ ಶ್ರಮದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಪ್ರತಾಪ್, ಸೇವಾ ಪ್ರತಿನಿಧಿಗಳಾದ ಕಾವೇರಿ, ಲತಾ ಮತ್ತು ದಿವ್ಯ, ಜನ ಜಾಗೃತಿ ವೇದಿಕೆ ಸದಸ್ಯ ಸುಬ್ರಮಣ್ಯ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಬಿ.ಪಿ. ಸುನಂದಿನಿ, ಹೊದ್ದೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಕುಸುಮ, ಹೊದ್ದೂರು ಗ್ರಾಮ ಪಂಚಾಯಿತಿ ನ್ಯಾಯ ಸಮಿತಿಯ ಅಧ್ಯಕ್ಷ ಮೊಣ್ಣಪ್ಪ, ಹೊದ್ದೂರು ವಾಟೇಕಾಡು ಮತ್ತು ಮರಗೋಡುವಿನ ಶೌರ್ಯ ವಿಪತ್ತು ನಿರ್ವಹಣಾ ತಂಡದ 26 ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದ್ದರು. ಶ್ರಮದಾನದ ನಂತರ ಎರಡು ಶೌರ್ಯ ಘಟಕದ ಮಾಸಿಕ ಸಭೆಯನ್ನು ಶಾಲೆಯ ಸಭಾಂಗಣದಲ್ಲಿ ನಡೆಸಲಾಯಿತು.
ಚಿತ್ರ ಮತ್ತು ವರದಿ: ಟಿ.ಸಿ. ನಾಗರಾಜ್, ಮೂರ್ನಾಡು
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network